ಕೆರೆಯಲ್ಲಿ ಮುಳುಗಿ ಯುವಕ ಸಾವು



ಸುದ್ದಿಲೈವ್/ಸೊರಬ

ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಭೈರೆಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

ಗ್ರಾಮದ ಮಿಥುನ್ ಗೌಡ (21) ಮೃತ ಯುವಕ. ಶುಕ್ರವಾರ ಬೆಳಗ್ಗೆ ಸಾಕಿದ ಜಾನುವಾರುಗಳನ್ನು ಮೈತೊಳೆಯಲು ಹೋದಾಗ ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. 

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆ ಹಚ್ಚಿ ಮೇಲೆತ್ತಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close