ಸುದ್ದಿಲೈವ್/ಶಿವಮೊಗ್ಗ
ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನವೆಂಬರ್ 1 ರಂದು ಬೆಳಿಗ್ಗೆ 9.00 ಗಂಟೆಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಇವರು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಭದ್ರಾವತಿ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ/ ಮಂಡಳಿ/ ಪ್ರಾಧಿಕಾರಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲ್ಗೊಳ್ಳುವರು.
ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಸೈನ್ಸ್ ಕಾಲೇಜು ಮೈದಾನದಿಂದ ಡಿ.ಎ.ಆರ್ ಪೊಲೀಸ್ ಪೆರೇಡ್ ಮೈದಾನದವರೆಗೆ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಬರಲಿದೆ. ಸಂಜೆ 5 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸಂಪರ್ಕ ಅಧಿಕಾರಿಗಳು/ನೌಕರರ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಮತ್ತು ಕನ್ನಡ ಸಂಘಟನೆಗಳು ಹಾಗೂ ಸಾರ್ವಜನಿಕರು ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ವಿನಂತಿಸಲಾಗಿದೆ.