ಸುದ್ದಿಲೈವ್/ಶಿವಮೊಗ್ಗ
ತಾಲೂಕಿನ ಚೋರಡಿ ಸಮೀಪದ ಹೊರಬೈಲು ಗ್ರಾಮದಲ್ಲಿ ಗೋ ಮಾತೆಯೊಂದು ಅವಳಿ ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನಡೆದಿದೆ.
ಹೊರಬೈಲು ಗ್ರಾಮದ ಎನ್.ನಾಗಪ್ಪ ಅವರ ಮನೆಯ ಮಲೆನಾಡು ಗಿಡ್ಡ ಹಸು ಅವಳಿ ಕರುಗಳಿಗೆ ಜನ್ಮ ನೀಡಿದೆ. ಒಂದು ಗಂಡು ಹಾಗೂ ಒಂದು ಹೆಣ್ಣು ಕರುವಿಗೆ ಜನ್ಮ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಅವಳಿ ಕರುಗಳು ಆರೋಗ್ಯದಿಂದ ಎಂದು ಕುಟುಂಬದವರು ತಿಳಿಸಿದ್ದಾರೆ.