Girl in a jacket

ಡಿ.01 ರಂದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.01 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2.00ರವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. 

ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ, ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close