Girl in a jacket

ಬೃಹತ್ ರಕ್ತದಾನ ಶಿಬಿರ



ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ರೌಂಡ್ ಟೆಬಲ್ 166 , 266 ಹಾಗೂ ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದಲ್ಲಿ ಆರ್ ಎಂಆರ್ ರಸ್ತೆಯ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶುಕ್ರವಾರ ಬೃಹತ್ ರಕ್ತದಾನ ಶಿಬಿರ ನಡೆಯಿತು. 

ಶಿವಮೊಗ್ಗ ರೌಂಡ್ ಟೇಬಲ್ 166 ಘಟಕದ ಕಾರ್ಯಕ್ರಮದ ಸಂಚಾಲಕರಾದ ಡಾ. ಸ್ವರೂಪ್ ಮಲ್ಲೇಶ್, ಶ್ರದ್ದಿತ್, ರೌಂಡ್ ಟೇಬಲ್ ಛೇರ್ಮನ್ ಆದಿತ್ಯ ಆಚಾರ್ಯ, ವೈಸ್ ಛೇರ್ಮನ್ ಈಶ್ವರ್ ಸರ್ಜಿ, ಕಾರ್ಯದರ್ಶಿ ಗುರು ಹಂಜಿ, ರೌಂಡ್ ಟೇಬಲ್ 266ನ ರೋಹನ್, ಆದರ್ಶರಾಜು ಮತ್ತಿತರರು ಹಾಜರಿದ್ದರು. ಇದೇ ವೇಳೆ 75 ನೇ ಬಾರಿಗೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಹಿರಿಯ ಪತ್ರಕರ್ತರಾದ ಗೋವ ಮಹೋನ್ ಕೃಷ್ಣ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close