Girl in a jacket

ಎಸ್ಪಿ ನೇತೃತ್ವದಲ್ಲಿ ನಡೆದ ಅಪರಾಧ ವಿಮರ್ಶನಾ ಸಭೆ




ಸುದ್ದಿಲೈವ್/ಶಿವಮೊಗ್ಗ

ಇಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ಡಿಎಆರ್  ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಿದರು.

1) ತನಿಖೆಯಲ್ಲಿರುವ ಪ್ರಕರಣಗಳ ವಿಮರ್ಶೆ ನಡೆಸಿ ಸೂಕ್ತ ಕಾಲ ಮಿತಿಯೊಳಗೆ ತನಿಖೆ ಪೂರೈಸಿ, ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿದರು. 

2) ಠಾಣಾ ವ್ಯಾಪ್ತಿಯಲ್ಲಿ ವರದಿಯಾಗುವ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮುಂಜಾಗ್ರತಾಕ್ರಮವಾಗಿ ಸಂಚಾರ ನಿಯಮ ಉಲ್ಲಂಘನಾ ಪ್ರಕಣಗಳನ್ನು ದಾಖಲಿಸುವಂತೆ ಹಾಗೂ ಸಂಚಾರ ಸೂಚನಾ ಫಲಕಗಳು, ರಂಬಲ್ ಸ್ಟ್ರಿಪ್ಸ್, ಕ್ಯಾಟ್ ಐಸ್, ರೋಡ್ ಹಂಪ್ಸ್ ಗಳನ್ನು ಅಳವಡಿಸುವ ಮೂಲಕ  ಅಪಘಾತ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


3) ಠಾಣಾ ವ್ಯಾಪ್ತಿಯಲ್ಲಿ ಗುಪ್ತ ಮಾಹಿತಿ ವ್ಯವಸ್ಥೆಯನ್ನು ಬಲಪಡಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಮುಂಗಡವಾಗಿ ಮಾಹಿತಿಯನ್ನು ಸಂಗ್ರಹಿಸಿ,  ಮೇಲಾಧಿಕಾರಿಗಳಿಗೆ ನೀಡುವುದು, ಸಂಬಂಧಪಟ್ಟ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ  ನಿರೀಕ್ಷಕರು ಮೇಲ್ವಿಚಾರಣೆ ವಹಿಸಲು ಸೂಚಿಸಿದರು.  


4) ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಠಾಣಾ ವ್ಯಾಪ್ತಿಯಲ್ಲಿ ತಳ ಮಟ್ಟದ ಮಾಹಿತಿಯನ್ನು ಕಲೆ ಹಾಕಿ ದಾಳಿ ನಡೆಸಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳುವುದು.

5) ಪೊಲೀಸ್ ಉಪ ವಿಭಾಗಾಧಿಕಾರಿಗಳು ತಮ್ಮ ಅಧೀನ ಪೊಲೀಸ್ ಠಾಣೆಗಳ ಆವರಣದಲ್ಲಿರುವ  ವಾರಸುದಾರರು ಸುಪರ್ದಿಗೆ ಪಡೆಯದೇ ಇರುವ, ತನಿಖೆಯಲ್ಲಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಮತ್ತು ಘನ ನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣಗಳಲ್ಲಿನ ವಾಹನಗಳನ್ನು ವಿಂಗಡಿಸಿ,  ವಿಲೇವಾರಿ ಮಾಡುವ  ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

ಈ ಸಭೆಯಲ್ಲಿ ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ಮತ್ತು ಎ ಜಿ ಕಾರ್ಯಪ್ಪ,  ಕೃಷ್ಣಮೂರ್ತಿ ಟಿ. ಪಿ. ಪೊಲೀಸ್ ಉಪಾದೀಕ್ಷಕರು, ಡಿಎಆರ್ ಶಿವಮೊಗ್ಗ, ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ,  ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ, ಗೋಪಾಲಕೃಷ್ಣ  ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ, ಕೇಶವ್ ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ,  ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ಕೃಷ್ಣಮೂರ್ತಿ ಪೊಲೀಸ್ ಉಪಾದೀಕ್ಷಕರು, ಸಿ.ಇ.ಎನ್ ಪೊಲೀಸ್ ಠಾಣೆ ಶಿವಮೊಗ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close