Girl in a jacket

ಪೌರಾಡಳಿತ ಮತ್ತು ಹಜ್ ಸಚಿವರ ಜಿಲ್ಲಾ ಪ್ರವಾಸ



ಸುದ್ದಿಲೈವ್/ಶಿವಮೊಗ್ಗ

ರಾಜ್ಯ ಸರ್ಕಾರದ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್‌ರವರು ನ.22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಅಂದು ಮಧ್ಯಾಹ್ನ 1.55ಕ್ಕೆ  ವಿಮಾನದ ಮೂಲಕ ಆಗಮಿಸಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ. 

ಮ 3.00ಕ್ಕೆ ಶಿವಮೊಗ್ಗ ಜಿಲ್ಲಾ ಇಂದಿರಾ ಕ್ಯಾಂಟೀನ್/ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡುವರು. ಮ. 3.30ಕ್ಕೆ ಜಿಲ್ಲಾ ಆಡಳಿತ ಭವನದಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಸಂಜೆ 5.00ಕ್ಕೆ ಜಿಲ್ಲಾ ಕಾಂಗ್ರೇಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ. ಮುರಳಿಧರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close