ಸುದ್ದಿಲೈವ್/ಶಿವಮೊಗ್ಗ
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳ ಹುದ್ದೆಗೆ ಸೆಪ್ಟೆಂಬರ್ 25 ರಂದು ಏರ್ಪಡಿಸಲಾಗಿದ್ದ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕಿಯರ ಆಯ್ಕೆ ಪ್ರಕ್ರಿಯೆಯಲ್ಲಿ ತಾತ್ಕಾಲಿಕ ಪಟ್ಟಿಯನ್ನು ಸಿದ್ದಪಡಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ನ.12 ರೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದೆಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.