ಸುದ್ದಿಲೈವ್/ಸೊರಬ
ಆಕಸ್ಮಿಕ ಬೆಂಕಿ ತಗುಲಿ ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದ ಕಾರೊಂದು ಸಂಪೂರ್ಣ ಸಂಪೂರ್ಣ ಸುಟ್ಟು ಕರಲಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟವಾಗಿರುವ ಘಟನೆ ತಾಲೂಕಿನ ಉಳವಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಉಳವಿ ಗ್ರಾಮದ ನಾಸೀರ್ ಸಾಬ್ಜಾನ್ ಸಾಬ್ ಎಂಬುವವರಿಗೆ ಸೇರಿದ ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದ ಓಮಿನಿ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಪರಿಣಾಮ ಕಾರು ಸುಟ್ಟು ಕರಕಲಾಗಿದ್ದು, ನೂತನ ಮನೆ ನಿರ್ಮಾಣಕ್ಕಾಗಿ ಸಂಗ್ರಹಿಸಿಟ್ಟಿದ್ದ ನಾಟ, ಬೋರ್ ವೆಲ್ ಪೈಪುಗಳು, ಶುಂಠಿ ಕಣಕ್ಕೆ ಬಳಸುವ ಪ್ಲಾಸ್ಟಿಕ್ ಚೀಲಗಳು ಹಾಗೂ ಮನೆಯ ಹಿಂಭಾಗ ಸಂಪೂರ್ಣ ಸುಟ್ಟು ಹೋಗಿದೆ. ಸುಮಾರು ಐದು ಲಕ್ಷ ರೂ., ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಂಕಿ ತಗುಲಿರುವ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.