ಡಿ.5 ಮತ್ತು 06 ರಂದು ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ಡಿ.05 ಮತ್ತು  ಡಿ.06 ರಂದು ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪತ್ರಿಕಾ ಪ್ರಕಟಣೆಹೊರಡಿಸಿದೆ. 

ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ  ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.05 ರಂದು ಬೆಳಗ್ಗೆ 06.00 ರಿಂದ ಸಂಜೆ 6.00ರವರೆಗೆ ಈ ಕ ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ, ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಡಿ. 06 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.  

ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close