ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಅಕ್ಕ ಕೆಫೆ” ಎಂಬ ಮಹಿಳೆಯರೆ ನಡೆಸುವ ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಯಾಗಲು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಡೇ-ನಲ್ಮ್ ಯೋಜನೆಯಡಿ ರಚನೆಯಾದಂತಹ ಗುಂಪುಗಳು “ಅಕ್ಕ ಕೆಫೆ” ಹಾಗೂ “ಅಕ್ಕ ಬೇಕ್” ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ. 11 ರೊಳಗಾಗಿ ಸಲ್ಲಿಸುವಂತೆ ಪಾಲಿಕೆ ಉಪ ಆಯುಕ್ತರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.