ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ, ಡಿಸೆಂಬರ್ 02(ಕರ್ನಾಟಕ ವಾರ್ತೆ) ಶಿವಮೊಗ್ಗ ತಾಲ್ಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುರಿಂದ ವಿದ್ಯುತ್ ವ್ಯತ್ಯವಾಗಲಿದೆ.
ಡಿ.12 ರ ಬೆಳಿಗ್ಗೆ 9.30 ರಿಂದ 6 ಗಂಟೆವರೆಗೆ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ಚನ್ನಹಳ್ಳಿ, ಇಟ್ಟಿಗೇಹಳ್ಳಿ, ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.