ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗದಲ್ಲಿ ಮೂರುದಿನ ನಿರಂತರವಾಗಿ ವಿದ್ಯುತ್ ವ್ಯತ್ಯಯವಾಗಲಿದೆ. ವಿವಿಧ ಕಾಮಗಾರಿಗಳ ಹಿನ್ನಲೆಯಲ್ಲಿ ಡಿ.08, 09 ಹಾಗೂ 10 ರಂದು ಶಿವಮೊಗ್ಗದ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ನ ಕಣ್ಣಮುಚ್ಚಾಲೆ ಮುಂದುವರೆಯಲಿದೆ.
ಶಿವಮೊಗ್ಗ ತಾಲ್ಲೂಕು, ಹೊಳಲೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿರುವ 66/11 ಕೆವಿ ವಿವಿ ಮಾರ್ಗದಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಡಿ.08 ಮತ್ತು ಡಿ. 09 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ. ತಾವರೆ ಗ್ರಾಮಗಳ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಡಿ.10 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ತಾಲ್ಲೂಕು, ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿರುವ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣ ಕಾಮಗಾರಿ ಇರುವುದರಿಂದ ಡಿ.10 ಬೆಳಗ್ಗೆ 09.30 ರಿಂದ ಸಂಜೆ 3.00 ಗಂಟೆ ವರಗೆ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು,
ಬೆಳ್ಳುರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳಿ, ಭೋವಿಕಾಲೋನಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.