ರಮೇಶ್ ಜಾರಕಿಹೊಳೆ ಹೇಳಿಕೆಗೆ ಉತ್ತರಿಸೊಲ್ಲ-ಬಿಎಸ್ ವೈ



ಸುದ್ದಿಲೈವ್/ಶಿವಮೊಗ್ಗ

ಶಾಸಕ ಯತ್ನಾಳ್ ಅಸಮಾಧಾನ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ಒಗ್ಗಟ್ಟಿನ ಮಂತ್ರವನ್ನ‌ಮತ್ತೊಮ್ಮೆ ಜಪಿಸಿದ್ದಾರೆ. 

ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಾಳೆ ಕೋರ್ ಕಮಿಟಿ ಸಭೆ ನಡೆಯಲಿದೆ. ಅಲ್ಲಿ ಯತ್ನಾಳ್ ಅವರ ಬಗ್ಗೆ ಚರ್ಚೆ ಆಗುತ್ತದೆಯೇ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ಇದಕ್ಕೆ ಯತ್ನಾಳ್ ರವರು ಒಪ್ಪಿಕೊಳ್ಳುತ್ತಾರೆ ಎಲ್ಲವೂ ಸರಿ ಹೋಗಲಿದೆ ಎಂಬ ಭರವಸೆ ನನಗೆ ಇದೆ ಎಂದು ಹೇಳಿದರು. 

ನಾಳೆ ಈ ಕುರಿತ ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದು ನಾವೆಲ್ಲ ಒಟ್ಟಾಗಿ ಹೋಗಲು ಸಾಧ್ಯವಾಗುತ್ತದೆ. ಬರುವ ಅಧಿವೇಶನದಲ್ಲಿ ಸರ್ಕಾರವನ್ನು ಒಟ್ಟಾಗಿ ಎದುರಿಸಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ. 


ಮನುಷ್ಯ ಸ್ವಭಾವದ ವೀಕ್ನೆಸ್ ಎಲ್ಲರಿಗೂ ಇರುತ್ತದೆ. ಮಾತನಾಡಿ ಸರಿಪಡಿಸಿದ ಮೇಲೆ ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸ ನನಗೆ ಇದೆ. ಯಡಿಯೂರಪ್ಪ ಹಾಗೂ ಅವರ ಪುತ್ರರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆ ಬಗ್ಗೆ ನನಗೇನು ಅಭ್ಯಂತರ ಇಲ್ಲ. ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದು ಆಗಿದೆ ಎಂದರು. 


ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು ನಾವು ನಾವೇ ಬಡದಾಡಿಕೊಳ್ಳುವುದು ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಅದಕ್ಕಾಗಿ ಎಲ್ಲವನ್ನು ಮರೆತು ಒಟ್ಟಾಗಿ ಹೋಗುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ ಎಂದು ತಿಳಿಸಿದರು. 


ಸರ್ಕಾರದ ಹಗರಣಗಳನ್ನು ಬಯಲು ಮಾಡಿ ಅದಕ್ಕೆ ನ್ಯಾಯಕೊಡಿಸುತ್ತೇವೆ. ಈಗಾಗಲೇ ಇಡಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ. ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ. ಈ ಕುರಿತು ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ನಾವೆಲ್ಲ ಒಟ್ಟಾಗಿ ಕುಳಿತು ಚರ್ಚೆ ಮಾಡುತ್ತೇವೆ. ನಾಳೆಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. 


ವಿಜೇಂದ್ರ ರಾಜ್ಯಾಧ್ಯಕ್ಷರಾಗಿದ್ದು ಯಡಿಯೂರಪ್ಪನವರ ಹೆಸರಿನ ಮೇಲೆ ಎಂದು ರಮೇಶ್ ಜಾರಕಿಹೊಳಿ ನೀಡಿಕೆ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು, ಕೇಂದ್ರದ ನಾಯಕರು. ಅವರು ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಡೀ ರಾಜ್ಯದ ಜನ ವಿಜಯೇಂದ್ರ ಅವರ ಓಡಾಟ ಮತ್ತು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ.‌ ಮೊನ್ನೆಯ ಮೂರು ಜಿಲ್ಲೆಗಳ ಪ್ರವಾಸದ ವೇಳೆ ಅವರಿಗೆ ಸಿಕ್ಕ ಜನ ಬೆಂಬಲ ಯಾವ ರೀತಿ ಇದೇ ಎಂಬುದನ್ನು ಜನ ಗಮನಿಸಿದ್ದಾರೆ ಎಂಬ ವಿಶ್ವಾಸ ತಿಳಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close