ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬೈಕ್ ಸವಾರ ಸಾವು-ಆದರೆ, ಮಾನವೀಯತೆ ಮೆರೆದ ಪಿಎಸ್ಐ



ಸುದ್ದಿಲೈವ್/ರಿಪ್ಪನ್ ಪೇಟೆ

ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗವಟೂರು ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನನ್ನು ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ರಿಪ್ಪನ್‌ಪೇಟೆಗೆ ತೆರಳುತ್ತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ತೀವ್ರ ಗಾಯವಾಗಿತ್ತು, 

ಕೂಡಲೇ  ಅದೇ ಮಾರ್ಗವಾಗಿ ಬಂದ ಪಿಎಸ್ ಐ ಗಾಯಾಳುವನ್ನ ತನ್ನ ಖಾಸಗಿ ವಾಹನದಲ್ಲಿ ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಗೆ ಶಿಫ್ಟ್ ಮಾಡುವ ವೇಳೆ ಸಂಜೀವ್ ಪೂಜಾರಿ ಮೃತಪಟ್ಟಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಸಂಭವಿಸುವ ವೇಳೆ 108 ನ ಸೇವೆಗಳ ಬಗ್ಗೆ ಹೆಚ್ಚಿನ ದೂರುಗಳು ಕೇಳಿ ಬರುತ್ತಿದೆ. ಇವುಗಳ ಅಲಭ್ಯತೆಯಿಂದಾಗಿ ಹೆಚ್ಚಿನ ಸಾವಾಗುತ್ತಿದೆ ಎಂಬ ಕೂಗಿನ ಮಧ್ಯೆ ಪಿಎಸ್ಐ ಯೊಬ್ಬರ ಮಾನವೀಯತೆ ಮೆರೆದಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close