ಜ.18 ರಂದು ವಿದ್ಯುತ್ ವ್ಯತ್ಯಯ

There will be power outage in the rural subdivision from 10 am to 6 pm on Jan. 18 as the conductor change is going on in the 66/11 KV power distribution center of Santekadur village.

ಸುದ್ದಿಲೈವ್/ಶಿವಮೊಗ್ಗ

ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.18 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

 ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ, ಎಫ್-4 ಸಂತೇಕಡೂರು, ಎಫ್-8 ಗಣಿದಾಳು ಮತ್ತು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, 

ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close