ಜಮೀರ್ ಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಲ್ಪಸಂಖ್ಯಾತರ ವೇದಿಕೆ ಆಗ್ರಹ

In case of expansion of the cabinet, the State Minority Protection Forum has proposed to appoint Minister Jameer Ahmed as Deputy Chief Minister and Member of Legislative Council Balkis Bhanu as Minister.

ಸುದ್ದಿಲೈವ್/ಶಿವಮೊಗ್ಗ

ಸಚಿವ ಸಂಪುಟ ವಿಸ್ತರಣೆ ಆದಲ್ಲಿ ಸಚಿವ ಜಮೀರ್ ಅಹಮದ್ ರನ್ನ ಉಪಮುಖ್ಯಯನ್ನಾಗಿ ನೇಮಿಸುವಂತೆ ಮತ್ತು ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಭಾನು ಅವರನ್ನ ಸಚಿವರನ್ನ ನೇಮಿಸುವಂತೆ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆ ಆಗ್ರಹಿಸಿದ್ದಾರೆ. 


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಸೈಯದ್ ಮುಜೀಬುಲ್ಲಾ ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ ಸಚಿವ ಸಂಪುಟದಲ್ಲಿ ಹಾಗೂ ನಿಗಮ ಮಂಡಳಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ನಿರೀಕ್ಷೆಯಂತೆ ಅವಕಾಶಗಳು ಸಿಕ್ಕಿಲ್ಲ ಎಂದು ತಿಳಿಸಿದರು. 

ಸಚಿವ ಜಮೀರ್ ಅಹಮದ್‌ರವರು ಜನಪ್ರಿಯ ಜಾತ್ಯಾತೀತ ನಾಯಕರಾಗಿದ್ದು ಜನಪ್ರಿಯ ಶಾಸಕರಾಗಿ ಯಶಸ್ವಿ ಸಚಿವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿರುತ್ತಾರೆ. ಅಲ್ಲದೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಇವರ ಕೊಡುಗೆ ಅನನ್ಯವಾಗಿದೆ. 

ಹಾಗೆಯೇ ಎಂಎಲ್ ಸಿ ಬಲ್ಕಿಷ್ ಬಾನುರವರು ವಿಧಾನ ಪರಿಷತ್ ಸದಸ್ಯರಾಗಿ ಜಿಲ್ಲೆಯ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಅತ್ಯಂತ ಕಡಿಮೆ ಅವಧಿಯಲ್ಲಿ ಜನಪ್ರಿಯರಾಗಿದ್ದಾರೆ. ಸರ್ಕಾರದ ಘನತೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಕ್ರಿಯಾಶೀಲ ಜನನಾಯಕಿಯಾಗಿದ್ದಾರೆ. ಆದರೆ ಜಿಲ್ಲೆಯಿಂದ ಈವರೆಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಸಚಿವರನ್ನಾಗಿ ಮಾಡಿರುವುದಿಲ್ಲ.

ಹಾಗಾಗಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಗಬೇಕಾದ ನ್ಯಾಯವನ್ನು ನೀಡುವ ನಿಟ್ಟಿನಲ್ಲಿ ಜನಪ್ರಿಯ ಸಚಿವರು ಕೊಡುಗೈ ದಾನಿ ಸಮರ್ಥ ನಾಯಕರಾದ ಬಿ.ಜೆಡ್. ಜಮೀರ್ ಅಹಮದ್ ಖಾನ್‌ರವರಿಗೆ ಉಪಮುಖ್ಯಮಂತ್ರಿಯನ್ನಾಗಿ, ಎಂಎಲ್ ಸಿ ಬಲ್ಕಿಷ್ ಬಾನುರವರನ್ನು ಸಚಿವರನ್ನಾಗಿ ನೇಮಕ ಮಾಡಿ ನಿಗಮ ಮಂಡಳಿಗಳಲ್ಲೂ ಸಹ ಅಲ್ಪಸಂಖ್ಯಾತ ಸಮುದಾಯವನ್ನು ಪರಿಗಣಿಸುವಂತೆ ವೇದಿಕೆಯು ಒತ್ತಾಯಿಸುತ್ತದೆ ಎಂದರು. 

ಈ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶೇಖ್ ಸಿರಾಜ್, ಜಿಲ್ಲಾ ಉಪಾಧ್ಯಕ್ಷರಾದ ಸೈಮನ್ ರಾಜ್, ಪದಾಧಿಕಾರಿಗಳಾದ ಜಫರುಲ್ಲಾ ಷರೀಪ್, ಸಾತಾಳಪುಡಿ ಹಳತನಘಟ್ಟ ಇರ್ಫಾನ್, ಅಂಜದ್ ಖಾನ್, ಅಪ್ರೋಜ್ ಖಾನ್, ನಜರುಲ್ಲಾ, ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close