ಒಳಮೀಸಲಾತಿ ಜಾರಿಗೆ ದಸಂಸ ಪ್ರೊ.ಕೃಷ್ಣಪ್ಪರ ಬಣ ಆಗ್ರಹ

The Karnataka Dalit Sangharsa Samiti (founded by Prof. B. Krishnappa) today protested in front of the District Collector's office and later submitted a request to the Chief Minister through the district administration that internal reservation should be implemented without delay as per the Supreme Court order.


ಸುದ್ದಿಲೈವ್/ಶಿವಮೊಗ್ಗ

ಸುಪ್ರೀಂ ಕೋರ್ಟ್ ಆದೇಶದಂತೆ ವಿಳಂಬ ಮಾಡದೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪಸ್ಥಾಪಿಸಿದ) ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ಸೂಕ್ತ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ಮಾಡದೇ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೂ ರಾಜ್ಯ ಸರ್ಕಾರ ಅದನ್ನು ವಿಳಂಬ ಮಾಡುವುದು ಸರಿಯಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಸಮಿತಿಗೆ ಈ ಹಿಂದೆ 7 ವರ್ಷಗಳ ಕಾಲ ಅಧ್ಯಯನ ನಡೆಸಿದ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ಆಯೋಗದ ದತ್ತಾಂಶಗಳಿರುವ ವರದಿಯ ಶಿಫಾರಸ್ಸುಗಳನ್ನು ಬಳಸಿಕೊಂಡು ವರದಿ ತಯಾರಿಸಲು ಸರ್ಕಾರ ಆದೇಶ ನೀಡಬೇಕು. ಮೀಸಲಾತಿಯ ಶೇ.17ರ ಅನುಪಾತದಲ್ಲಿ ಹೆಚ್ಚುವರಿ ಶೇ.2ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಎಬಿಸಿಡಿ ವರ್ಗೀಕರಣದ ಗುಂಪುಗಳಿಗೆ ಸಮಾನವಾಗಿ ಹಂಚಬೇಕು. ಅದರಲ್ಲಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ.7ರಷ್ಟು ಮೀಸಲಾತಿಯನ್ನು ನಿಗಧಿಪಡಿಸಬೇಕು ಎಂದು ಪತ್ರಿಭಟನಕಾರರು ಆಗ್ರಹಿಸಿದರು.

ಸಚಿವ ಸಂಪುಟ ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಯನ್ನು ತಡೆಹಿಡಿಯಬೇಕು. ನಿಜವಾದ 49 ಅಲೆಮಾರಿಗಳನ್ನು ಗುರುತಿಸಿ ಶೆ.1ಕ್ಕಿಂತ ಹೆಚ್ಚು ಒಳಮೀಸಲಾತಿ ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಪದಾಧಿಕಾರಿಗಳಾದ ಎಂ.ಏಳುಕೋಟಿ, ಹನುಮಂತಣ್ಣ ಶಿವಬಸಪ್ಪ, ಕೃಷ್ಣಬೊಮ್ಮನಕಟ್ಟೆ, ರವಿ ಹರಿಗೆ, ಬಸವರಾಜ್ ಹಸ್ವಿ, ಎಂ.ರಮೇಶ್‌ಚಿಕ್ಕಮರಡಿ, ನಾಗರಾಜ್ ಕಾಚಗೊಂಡನಹಳ್ಳಿ ಸೇರಿದಂತೆ ಹಲವರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close