ಎರಡು ದಿನ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

In Shimoga, there will be power interruption for two days for maintenance of electrical appliances in various extensions. There will be power outages on Jan 30 and 31.


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ಎರಡು ದಿನಗಳು ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪರಿಕರಗಳ ನಿರ್ವಾಹಣೆಗಾಗಿ ವಿದ್ಯುತ್ ವ್ಯತ್ಯಯವಾಗಲಿದೆ. ಜ.30 ಮತ್ತು 31 ರಂದು ವಿದ್ಯುತ್ ವ್ಯತ್ಯಯವಾಗಲಿದೆ. 

ನಗರದ ಸಿದ್ಧಯ್ಯ ಸರ್ಕಲ್ ಮತ್ತು ಬಟ್ಟೆ ಮಾರ್ಕೆಟ್ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್ ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.30 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಜ.31 ರಂದು ವಿದ್ಯುತ್ ವ್ಯತ್ಯಯ

 ನಗರದ ಅಶೋಕ ರಸ್ತೆ ಮತ್ತು ಶಿವಾಜಿ ರಸ್ತೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಶೋಕರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜ.31 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close