ಸುದ್ದಿಲೈವ್/ಶಿವಮೊಗ್ಗ
ಶುಂಠಿ ಬೆಲೆ ಕುಸಿತಗೊಂಡಿದ್ದು, ಸರ್ಕಾರ ಕೂಡಲೇ ಖರೀದಿ ಕೇಂದ್ರವನ್ನು ತೆರೆಯಬೇಕು ಎಂದು ರಾಜ್ಯ ಶುಂಠಿ ಬೆಳೆಗಾರರ ಸಂಘದ ಜಿಲ್ಲಾ ಘಟಕ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಶುಂಠಿ ದರ ತೀವ್ರ ಕುಸಿತಗೊಂಡಿದೆ. ಕ್ವಿಂಟಾಲ್‌ಗೆ 1500ರಿಂದ 2000 ಮಾತ್ರ ಇದ್ದು, ಇದು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಇದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಖರೀದಿ ಕೇಂದ್ರಗಳ ಮೂಲಕ ಕ್ವಿಂಟಾಲ್‌ಗೆ 7 ಸಾವಿರ ರೂ. ದರ ನೀಡಿ, ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಗಿರೀಶ್‌ಕುಮಾರ್, ಚಂದ್ರಶೇಖರ್, ರೇವಣ್ಣಪ್ಪ, ಶಿವಪ್ಪ, ರಮೇಶ್, ಕೃಷ್ಣಪ್ಪ ಸೇರಿದಂತೆ ಹಲವರಿದ್ದರು.