ಎಟಿಎಂ ರಾಬರಿಗೆ ವಿಫಲ ಯತ್ನ ಆರೋಪಿ ಬಂಧನ

On the night of January 26, they tried to steal the Canara Bank ATM on Nehru Road under Shimoga Kote Police Station by pulling the door. A case was registered at the Kote police station on the basis of a complaint filed by the manager of Canara Bank and an investigation was carried out.

ಸುದ್ದಿಲೈವ್/ಶಿವಮೊಗ್ಗ

ಜ.26  ರಂದು ರಾತ್ರಿ ಶಿವಮೊಗ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಹರು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ATM ಬಾಗಿಲು ಎಳೆದು ಕಳ್ಳತನ ಮಾಡಲು ಪ್ರಯತ್ನಿಸಿರುದ್ದರು. ಕೆನರಾ ಬ್ಯಾಂಕ್ ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ಕೋಟೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. 

ಪ್ರಕರಣದಲ್ಲಿ ಆರೋಪಿತನ ಪತ್ತೆಗಾಗಿ  ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ,  ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು-2, ಶಿವಮೊಗ್ಗ ಜಿಲ್ಲೆ  ರವರ ಮಾರ್ಗದರ್ಶನದಲ್ಲಿ,  ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಹರೀಶ್ ಕೆ ಪಟೇಲ್ ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ,  ಸಂತೋಷ್ ಭಾಗೋಜಿ, ಪಿಎಸ್ಐ, ಕೋಟೆ ಪೊಲೀಸ್ ಠಾಣೆ , ಹರ್ಷ ಎಎಸ್ಐ   ಮತ್ತು ಸಿಬ್ಬಂಧಿಗಳಾದ ಸಿಪಿಸಿ ಕಿಶೋರ್, ಆಂಜಿನಪ್ಪ, ಕಾಂತರಾಜ್ ಮತ್ತು ಪ್ರಕಾಶ್ ಹಾಗೂ ಇಲಾಖಾ ವಾಹನದ ಚಾಲಕರಾದ ಸೋಮು ಎಪಿಸಿ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ. 


ಸದರಿ ತನಿಖಾ ತಂಡವು ಕೂಡಲೇ ಕಾರ್ಯಪ್ರೌವೃತ್ತರಾಗಿ, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ* ಆರೋಪಿ ಮಹಮ್ಮದ್ ವಸೀಂ ಬಿನ್ ಅಲೀ ಹಸನ್, 22  ವರ್ಷ, ಕಾಂಕ್ರೀಟ್ ಕೆಲಸ, ಜಲೈ ಗ್ರಾಮ, ಸಮಾನಿ ತಾಲ್ಲೂಕು ಸಾರಸ್ ಜಿಲ್ಲೆ, ಬಿಹಾರ ರಾಜ್ಯ ಈತನನ್ನು ದಸ್ತಗಿರಿ ಮಾಡಲಾಗಿರುತ್ತದೆ. 

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close