ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ಅರುಣ್ ಕುಗ್ವೆ ಮೇಲೆ FIR

An FIR has been registered in the city police station against Arun Kugwe, secretary of the district BJP Yuva Morcha, on the charge of making a provocative speech.


ಸುದ್ದಿಲೈವ್/ಸಾಗರ

ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ಅರುಣ್ ಕುಗ್ವೆ ಮೇಲೆ  ಪೇಟೆ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸೋಮವಾರ ಬೆಳಗ್ಗೆ ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ ಅಜೀಂ ಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಇದರ ಬೆನ್ನಲ್ಲೇ ಪೇಟೆ ಪೋಲಿಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ಅರುಣ್ ಕುಗ್ವೆ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದು ಪೋಲಿಸರು ತನಿಖೆ ಮುಂದುವರಿಸಿದ್ದಾರೆ.

ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ರಾಜೀನಾಮೆ

ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಅರುಣ್ ಕುಗ್ವೆ ರವರ ಹೇಳಿಕೆ ಒಂದು ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಗರ ನಗರ ಮಂಡಲ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ಆಫೀಜ್ ವುಲ್ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವ ಹೇಳಿಕೆ ಒಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ. 

ಬಿಜೆಪಿ ಪಕ್ಷದಿಂದ ಬೆಂಗಳೂರಿನಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದು ಪ್ರಕರಣ ಖಂಡಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ ಹಾಗೂ ನಗರಾಧ್ಯಕ್ಷ ಗಣೇಶ್ ಪ್ರಸಾದ್ ರವರ ಹೇಳಿಕೆ ಸರಿ ಇದೆ ಆದರೆ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ಅರುಣ್ ಕುಗ್ವೆ ರವರ ಹೇಳಿಕೆ ನಮ್ಮ ಸಮುದಾಯಕ್ಕೆ ತುಂಬಾ ನೋವುಂಟು ಮಾಡಿದೆ , ತಪ್ಪು ಯಾರೇ ಮಾಡಿದರು ಅವರಿಗೆ ಶಿಕ್ಷೆ ಆಗಲೇಬೇಕು ಬೆಂಗಳೂರಿನಲ್ಲಿ ನಡೆದ ಘಟನೆ ನಾವು ಕೂಡ ವಿರೋಧಿಸುತ್ತೇವೆ , ಯಾರು ಒಬ್ಬ ಕಿಡಿಗೇಡಿ ಮಾಡಿರುವ ಘಟನೆಯನು ಇಡೀ ಸಮುದಾಯಕ್ಕೆ ಬೆಟ್ಟು ತೋರಿಸುವುದು ಸರಿಯಲ್ಲ. ಅರುಣ್ ಕುಗ್ವೆ ರವರ ಹೇಳಿಕೆ ನಮ್ಮ ಮನಸ್ಸಿಗೆ ಹಾಗೂ ನಮ್ಮ ಸಮುದಾಯಕ್ಕೆ ನೋವುಂಟು ಮಾಡಿದೆ ಅದರಿಂದ ನಾನು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. 

ಈಗಾಗಲೇ ನಗರ ಅಧ್ಯಕ್ಷರಿಗೆ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಲಾಗಿದ್ದು ನಾಳೆ ನಾನು ಹಾಗೂ ನಗರ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮುತಾಹಿರ್ ಅಧ್ಯಕ್ಷರಿಗೆ ಭೇಟಿ ನೀಡಿ ರಾಜೀನಾಮೆ ಪತ್ರ ನೀಡುತ್ತೇವೆ ಎಂದು ವೈರಲ್ ಆಗಿರುವ ವಿಡಿಯೋದಲ್ಲಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close