ಫೆ.24 ರಂದು ಉದ್ಯೋಗ ಮೇಳ



ಸುದ್ದಿಲೈವ್/ಶಿವಮೊಗ್ಗ

ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜ ಆವರಣದಲ್ಲಿ ಉದ್ಯೋಗ ಮೇಳವನ್ನು(job fair) ಆಯೋಜಿಸಲಾಗಿದೆ. (Arrangement)

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಯಾವುದೇ ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ/ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು. 

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ http://forms.gle/se41paGCoRiexPPP9   ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-255294/ 9019485688 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಹೆಚ್.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close