ಸುದ್ದಿಲೈವ್/ಶಿವಮೊಗ್ಗ
ಫೆ.26 ರಂದು ಮಹಾಶಿವರಾತ್ರಿ ಹಬ್ಬದ(festival) ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ(animal) ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಅಂದಿನ ಒಂದು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.