Suddilive || Shivamogga
ವಾಹನಗಳ ಮಾರ್ಗ ಬದಲಾವಣೆ, Change of vehicle route
ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಫೆ. 26 ರ ಬೆಳಗ್ಗಿನ ಜಾವ 4 ರಿಂದ 27ರ ಬೆಳಗಿನ ಜಾವದವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್. ಹೆಚ್. ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್. ಹೆಚ್. ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.
Conclusion-Vehicle, Route