The police have arrested three people in connection with the incident in which a woman officer who went to stop illegal sand mining in Bhadravathi was abused and threatened with life.
ಸುದ್ದಿಲೈವ್/ಭದ್ರಾವತಿ
ಭದ್ರಾವತಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಮೂವರನ್ನ ಪೊಲೀಸರು ಬಂಧಿಸಿದ್ದಾರೆ.
ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿಯಾದ ರವಿ (38) ಬಿನ್ ಮಲ್ಲೇಶಪ್ಪ, ಹಾಸನ ಜಿಲ್ಲೆಯ ಅರಕಲಗೋಡಿನ ನಿವಾಸದ ವರಣ್ (34) ಬಿನ್ ರಾಜಶೇಖರ್, ಸುರೇಂದ್ರ ಗೌಡ ಕ್ಯಾಂಪ್ ನ ಅಜಯ್ ಬಿನ್ ತಿಪ್ಪೇಶ್ (28) ಎಂಬುವರನ್ನ ಭದ್ರಾವತಿ ಹಳೇ ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ 6-7 ಜನ ಎಂದು ನಮೂದಿಸಲಾಗಿದ್ದು ಉಳಿದವರ ಬಂಧನಕ್ಕೆ ಖಾಕಿ ಪಡೆ ಭರ್ಜರಿ ಬಲೆ ಬೀಸಿದೆ. ಮಹಿಳಾ ಅಧಿಕಾರಿಗೆ ಅವ್ಯಾಚ್ಯ ಶಬ್ದಗಳ ನಿಂದನೆ, ಜೀವ ಬೆದರಿಕೆ ವಿಚಾರದಲ್ಲಿ ಕಾನೂನು ತನ್ನ ಕೆಲಸ ಆರಂಭಿಸಿದೆ.