ಎ ಮತ್ತು ಬಿ ಖಾತಾ ಪಡೆಯಲು ಅವಕಾಶ

In Shimoga Municipal Corporation, Commissioner of Shimoga Municipal Corporation said in a release that B-Khatha have been given to the plots/buildings constructed in unauthorized areas till the end of 10/09/2024.


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದೆ.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.

ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close