ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Online applications are invited for the posts of Branch Post Keeper, Assistant Branch Post Keeper and Dock Sevak in the Department of Posts.


ಸುದ್ದಿಲೈವ್/ಶಿವಮೊಗ್ಗ

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

 ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್‌ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನöಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಶಿವಮೊಗ್ಗ ಅಂಚೆ ವಿಭಾಗದಲ್ಲಿ 36 ಹುದ್ದೆಗಳು ಖಾಲಿ ಇರುತ್ತವೆ. ಹೆಚ್ಚಿನ ಮಾಹಿತಿಗೆ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಶಿವಮೊಗ್ಗ ಅಂಚೆ ವಿಭಾಗದ ಸಂಪರ್ಕ ಸಂಖ್ಯೆ 08182-222516 ಆಗಿರುತ್ತದೆ ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close