ಅಂಬೇಡ್ಕರ್ ಅವರ ಆಶಯಕ್ಕೆ ತಕ್ಕಂತಹ ಬಜೆಟ್-ಶಾಸಕ ಚೆನ್ನಿ

Union Finance Minister Nirmala Sitharaman has presented the budget for the eighth time and this time she has given high priority to education. MLA Chennabasappa opined that this fulfills Ambedkar's wish.


ಸುದ್ದಿಲೈವ್/ಶಿವಮೊಗ್ಗ

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ್ದು, ಈಬಾರಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದು ಅಂಬೇಡ್ಕರ್ ಅವರ ಆಶಯಕ್ಕೆ ಪೂರಕವಾಗಿದೆ ಎಂದು ಶಾಸಕ ಚೆನ್ನಬಸಪ್ಪ ಅಭಿಪ್ರಾಯಪಟ್ಟರು. 

ಮಾಧ್ಯಮಗಳ ಜೊತೆ ಮಾತನಾಡಿ, ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತ ಕ್ರಮವನ್ನು ಘೋಷಣೆ ಮಾಡಿದ್ದಾರೆ. ತಾಯಿ ಹೃದಯದ ಬಜೆಟನ್ನು ಅವರು ನೀಡಿದ್ದಾರೆ ಎಂದರು. ಕಾಂಗ್ರೆಸಿಗರು ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಸಿದ್ದಾರೆ. ಯಾವ ಯಾವ ರಾಜ್ಯಗಳಿಗೆ ಏನೇನು ಕೊಡಬೇಕು ಎಂಬುದರ ಬಗ್ಗೆ ಕಾಂಗ್ರೆಸ್ಸಿಗರು ಸಲಹೆ ನೀಡುವ ಅಗತ್ಯವಿಲ್ಲ ಎಂದಿದ್ದಾರೆ. 

ಬಿಹಾರಕ್ಕೆ ಈ ಬಾರಿ ಜಾಸ್ತಿ ನೀಡಿರಬಹುದು. ಮುಂದಿನ ಬಾರಿ ಕರ್ನಾಟಕಕ್ಕೂ ಸಹ ಕೊಡಬಹುದು. ರೈಲ್ವೆ ಸೇರಿದಂತೆ ಕೇಂದ್ರದ ಯೋಜನೆಗಳು ಶಿವಮೊಗ್ಗಕ್ಕೂ ಬಂದಿದೆ. ಒಟ್ಡಿನಲ್ಲಿ ಗ್ರಾಮೀಣ ಭಾರತದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ ಎಂದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close