ಸ್ನೇಹಿತೆಯನ್ನ ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ವೀಡಿಯೋ ವೈರಲ್

A woman was assaulted at Meggan Hospital. A man assaulted a woman in the hospital ward right in front of the police.


ಸುದ್ದಿಲೈವ್/ಶಿವಮೊಗ್ಗ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದಿದೆ. ಪೊಲೀಸರ ಎದುರಲ್ಲೇ ಆಸ್ಪತ್ರೆ ವಾರ್ಡ್ ನಲ್ಲೇ ವ್ಯಕ್ತಿಯೋರ್ವ ಹಲ್ಲೆ ಮಾಡಿದ್ದಾನೆ‌  ತನ್ನ ಪತ್ನಿಯನ್ನ ಆಸ್ಪತ್ರೆಗೆ ದಾಖಲಿಸಿದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. 

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಈ  ಘಟನೆ ನಡೆದಿದೆ. ಸಾರ್ವಜನಿಕರೇದುರಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆದಿದೆ. ಗಂಡ ಹೆಂಡತಿಯರ ಜಗಳವಾಗಿ ಹಲ್ಲೆಗೊಳಗಾಗಿದ್ದ ಸ್ನೇಹಿತೆಯನ್ನು ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲು ಮಾಡಿದ್ದರು. 


ನನ್ನ ಹೆಂಡತಿಯನ್ನು ಯಾಕೆ ಆಸ್ಪತ್ರೆಗೆ ದಾಖಲಿಸಿದೆ ಎಂದು ವ್ಯಕ್ತಿಯ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡುತ್ತಿದಂತೆ ವ್ಯಕ್ತಿಯನ್ನು  ಪೊಲೀಸರು ಎಳೆದುಕೊಂಡು ಹೋಗಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close