ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ


ಸುದ್ದಿಲೈವ್/ಶಿವಮೊಗ್ಗ

ನಾಳೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು (district Minister) ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ (Aeroplane)  ಶಿವಮೊಗ್ಗಕ್ಕೆ ಆಗಮಿಸಲಿರುವ ಸಚಿವರು ಹಲವಾರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2-30 ಕ್ಕೆ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ಬಂಗಾರಪ್ಪನವರ ಗ್ರಂಥಾಲಯ ಆರಂಭಿಸಲು  ಐದು ಲಕ್ಷ ರೂ.ಗಳ ಚೆಕ್ ನೀಡಲಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಸಂಭಾಷಣೆ ಮಾಡಲಿದ್ದಾರೆ. ಇಲ್ಲಿಂದ ಉಮಟೆಗದ್ದೆಯ ಕುಮಾರ್ ಅವರ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 

ನಿಸರಾಣಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಫೆ.18 ರಂದು ಮಂಗಳವಾರ ಕುಬಟೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ,  ಸರ್ವೆ ನಕ್ಷಾ ಕಾರ್ಯಕ್ರಮಕ್ಕೆ ಚಾಲನೆ, ಆನವಟ್ಟಿ ಪುರಸಭೆಯ ಪೌರ ಕಾರ್ಮಿಕರ ಜೊತೆ ಚರ್ಚೆ ನಡೆಸಲಿದ್ದಾರೆ. 

ನಂತರ ಬಾರಂಗಿ ಗ್ರಾಮ ಪಂಚಾಯಿತಿ ಉದ್ಗಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಚೆನ್ನಾಪುರ ಅಂಗನವಾಡಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲಗಲಿ ಪಾಲ್ಗೊಂಡು ನೇರವಾಗಿ ರಸ್ತೆ ಮೂಲಕ ಬೆಂಗಳೂರು ತಲುಪಲಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close