ಸುದ್ದಿಲೈವ್/ಶಿವಮೊಗ್ಗ
ಲಾರಿ ಮತ್ತು ಬೈಕ್ ನಡುವೆ ಬೀಕರ ರಸ್ತೆ(Road) ಅಪಘಾತ(accident) ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ.
ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚ ಲಿಸುತ್ತಿದ್ದರು. ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ಬೈಕ್ ಲಾರಿಯ ಚಕ್ರಕ್ಕೆ ಸಿಲುಕಿದ್ದು ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರೀಶೀಲನೆ ನಡೆಸುತ್ತಿದ್ದಾರೆ. ಯುವಕರ ಹಿನ್ನಲೆ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Conclusion- accident, Road