ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಭದ್ರಾವತಿ ತಾಲೂಕು ಹೊರತುಪಡಿಸಿ ಉಳಿದ 06 ತಾಲೂಕುಗಳಲ್ಲಿ ಖಾಲಿಯಿರುವ 116 ಅಂಗನವಾಡಿ ಕಾರ್ಯಕರ್ತೆ ಮತ್ತು 360 ಸಹಾಯಕಿ ಹುದ್ದೆಗಳಿಗೆ (Job) ಪರಿಷ್ಕೃತ (Revised) ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಪ್ರಕಟಣೆ ಬೆನ್ನಲ್ಲೇ ಆಕ್ಷೇಪಣೆಗಳಿದ್ದಲ್ಲಿ ಫೆ 20 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸ ಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸ ಬಹುದಾಗಿದೆ.