A staff member of a prestigious college in Shimoga was found hanging in the experimental school of the college.
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆಯ ಪ್ರತಿಷ್ಠಿತ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವ ಕುಮಾರ್ (47) ಎಂಬುವರು ಇಂದು ಮಧ್ಯಾಹ್ನ ಲ್ಯಾಬರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ದೃವಕುಮಾರ್ ಪೆಸಿಟ್ ಕಾಲೇಜಿನಲ್ಲಿ ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರು ಹೋಬಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಎರಡು ತಿಂಗಳ ಹಿಂದೆ ಧೃವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗ ಬಜಾವಾಗಿದ್ದ ಇವರು ಇಂದು ಕಾಲೇಜಿನ ಪ್ರಯೋಗಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಂದು ಮಧ್ಯಾಹ್ನ ಸಹಪಾಠಿಗಳೊಬ್ಬರು ಊಟಕ್ಕೆ ಕರೆಯಲು ತೆರಳಿದಾಗ ದೃವ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅವರ ಸಾವಿನ ಕುರಿತು ಪೊಲೀಸರ ತನಿಖೆ ಮುಂದುವರೆದಿದೆ. ಅವರ ಮೃತ ದೇಹವನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪ್ರಕಾರ ಹಣಕಾಸಿನ ವಿಚಾರದಲ್ಲಿ ಆತ್ಮಹತ್ಯೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.