Sonia M has been elected as the first woman state general secretary from Shimoga district in the Karnataka Pradesh Youth Congress elections.
ಸುದ್ದಿಲೈವ್/ಶಿವಮೊಗ್ಗ
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಎಂ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಆಯ್ಕೆಯಾಗಿದ್ದರು.
ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಗೆ ನಡೆದ ಆಂತರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವ ಮುಖಾಂತರ ಮಹಿಳಾ ಕೋಟದಡಿ ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯಿಂದ ಏಕೈಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಆಯ್ಕೆಯಾಗಿದ್ದಾರೆ.
ಮತ ನೀಡಿದ ಎಲ್ಲಾ ಯುವ ಕಾಂಗ್ರೆಸ್ ಸಹೋದರ- ಸಹೋದರಿಯರಿಗೂ ಹಾಗೂ ಸಹಕರಿಸಿದ ಎಲ್ಲ ಪಕ್ಷದ ಹಿರಿಯ- ಕಿರಿಯ ನಾಯಕರುಗಳಿಗೂ , ಮುಖಂಡರುಗಳಿಗೆ ಅವರು ಕೃತಜ್ಞತೆಗಳನ್ನ ಸಲ್ಲಿಸಿದ್ದಾರೆ.