Suddilive || Shivamogga
Supporters of sagara MLA Gopalkrishna Belur assaulted and abused BJP workers, appeal to sp to take action against them
ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಗರ ಬಿಜೆಪಿ ಕಾರ್ಯರ್ತರು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
ಸಾಗರ ನಗರಸಭೆಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಂತರ ನಗರಸಭೆ ಗೇಟ್ ನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬಿಜೆಪಿ ಕಾರ್ಯಕರ್ತರನ್ನು ಕಂಡು ಅವಾಚ್ಯವಾಗಿ ಬೈದು, ಕಾರ್ಯಕರ್ತ ಗಿರೀಶ್ ಗುಳ್ಳೇಹಳ್ಳಿ ಅವರ ಶರ್ಟ್ ಹಿಡಿದೆಳೆದು ಜೇಬು ಹರಿದಿರುತ್ತಾರೆ. ಅಲ್ಲದೇ ಇತರೆ ಕಾರ್ಯಕರ್ತರ ಮೇಲೂ ದೌರ್ಜನ್ಯ ನಡೆಸಿದ್ದಾರೆ. ಆದ್ದರಿಂದ ಗೋಪಾಲಕೃಷ್ಣ ಬೇಳೂರು ಮತ್ತು ಅವರ ಸಂಗಡಿಗರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್, ದೇವೇಂದ್ರಪ್ಪ ಯಲಕುಂದಿ, ಮಲ್ಲಿಕಾರ್ಜುನ ಹಕ್ರೆ, ಮೈತ್ರಿ ಪಟೇಲ್, ಸವಿತಾ ವಾಸು, ಪ್ರಶಾಂತ್ ಕೆ.ಎಸ್. ಇತರರು ಇದ್ದರು.