ಜೋಗದಲ್ಲಿ ಕಾಮಗಾರಿ : ಪ್ರವಾಸಿಗರಿಗೆ ಪ್ರವೇಶ ನಿಷೇಧ-Jog-Entry prohibited for tourists

Suddilive || Shivamogga

Construction work in Jog-Entry prohibited for tourists

Jog, prohibitted

ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನೆಡೆಯುತ್ತಿದ್ದು ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

 ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಕಾಮಗಾರಿ ಅನುಷ್ಟಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆAಬ ಹಿತದೃಷ್ಟಿಯಿಂದ ಜೋಗ ಜಲಪಾತದ ಪ್ರವೇಶ ದ್ವಾರವನ್ನು ಜ.1 ರಿಂದ ಮಾ.15 ರವರೆ ಮುಚ್ಚಲಾಗಿರುತ್ತದೆ. ಮಾ.15 ರ ವೇಳೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿಯು ಪೂರ್ಣಗೊಳ್ಳದೇ ಇರುವುದರಿಂದ ಏ.30 ರವರೆಗೆ ಮುಚ್ಚಲಾಗಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ.

Jog Entry prohibited for tourists

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close