ಹಂಚಿನ ಸಿದ್ದಾಪುರ, ಹೊಳೆಹೊನ್ನೂರು ಭಾಗದಲ್ಲಿ ಸಚಿವ ಮಧು ಬಂಗಾರಪ್ಪ ಮಿಂಚಿನ ಸಂಚಲನ-Minister Madhu Bangarappa's lightning strike

 suddilive || Bhadravathi

 ಹಂಚಿನ ಸಿದ್ದಾಪುರ, ಹೊಳೆಹೊನ್ನೂರು ಭಾಗದಲ್ಲಿ ಸಚಿವ ಮಧು ಬಂಗಾರಪ್ಪ ಮಿಂಚಿನ ಸಂಚಲನ-Minister Madhu Bangarappa's lightning strike in the Siddapur, Holehonnur areas of Hanchina

Madhu Bangarappa, strike


ಇಂದು ತಾಲೂಕಿನ ಹಂಚಿನ ಸಿದ್ದಾಪುರ ಮತ್ತು ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಶಾಲೆಗೆ ಸಚಿವ ಮಧು ಬಂಗಾರಪ್ಪ ದಿಡೀರ್ ಭೇಟಿ ನೀಡಿ ಪರಿಶೀಲಿಸಿದರು. ಇದರಿಂದ ಅಧಿಕಾರಿಗಳಲ್ಲಿ ಸಂಚಲನ ಮೂಡಿಸಿದೆ. 

ಮೊದಲಿಗೆ ಹಂಚಿನ ಸಿದ್ದಾಪುರಕ್ಕೆ ಭೇಟಿ ನೀಡಿದ ಸಚಿವರು ಕುಸಿದು ಬಿದ್ದ ಭದ್ರಾ ಕಾಲುವೆಯ ಜನ ಸಂಪರ್ಕ ಸೇತುವೆಯನ್ನು ವೀಕ್ಷಿಸಿದರು.  ಸ್ಥಳೀಯ ಗ್ರಾಮಸ್ಥರು ತಮ್ಮ ತೋಟ ಹಾಗೂ ಗದ್ದೆಗಳಿಗೆ ಹೋಗಲು ತೊಂದರೆ ಉಂಟಾಗುತ್ತಿದೆ ಎಂದು ಸಚಿವರ  ಗಮನಕ್ಕೆ ಬಂದಿದ್ದಾರೆ. 

 ಶೀಘ್ರದಲ್ಲಿಯೇ ನೂತನ ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. 

ಬಳಿಕ ಹಂಚಿನ ಸಿದ್ದಾಪುರದ "ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ"ಗೆ ಭೇಟಿನೀಡಿದರು.‌ ಈ ವೇಳೆ  ಶಾಲೆಯ ವಿದ್ಯಾರ್ಥಿಗಳಿಗೆ  ರಸ್ತೆ ಹೆದ್ದಾರಿ ದಾಟಲು ಸಾಧ್ಯವಾಗದೆ ಅಪಘಾತ ಸಂಭವಿಸಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ.  ಅಗತ್ಯ  ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. 

ನಂತರ ತಾಲೂಕಿನ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿನೀಡಿದ ಸಚಿವರು  ಕಾಲೇಜು ಅಭಿವೃದ್ದಿ ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಅಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವಿಷಯಗಳಿಗೆ ಸಂಬಂಧಪಟ್ಟಂತೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. 

ಈ ವೇಳೆ ಸಿ.ಡಿ.ಸಿ ಸದಸ್ಯರು, ಕಾಲೇಜು ಸಿಬ್ಬಂದಿ ವರ್ಗ ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

Minister Madhu Bangarappa's lightning strike

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close