Suddilive || Soraba
ಸೊರಬ ಟು ಹಾನಗಲ್ ರೈಟ್... ರೈಟ್...!New bus service on Soraba-Hanagal route launched
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಶ್ವಮೇಧ ಬಸ್‌ಗೆ ಇಂದು ಶಿಕ್ಷಣ ಸಚಿವ ಶ್ರೀ ಎಸ್. ಮಧು ಬಂಗಾರಪ್ಪ ಹಸಿರು ನಿಶಾನೆ ತೋರುವ ಮೂಲಕ ನೂತನ ಬಸ್ ಸೇವೆಗೆ ಚಾಲನೆ ನೀಡಿದರು. ಈ ಸೇವೆಯು ಸಾಗರ - ಸೊರಬ - ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದ್ದು, ಹತ್ತು ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಹೊಸ ಮಾರ್ಗವನ್ನು ಪ್ರಾರಂಭಿಸಲಾಗಿದೆ. ಈ ಸೇವೆಯ ಸದುಪಯೋಗವನ್ನು ಜನತೆ ಪಡೆದುಕೊಳ್ಳಲಿ," ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
New bus service on Soraba-Hanagal route launched