PUC exams starts from today-ಇಂದಿನಿಂದ ದ್ವಿತೀಯ PUC ಪರೀಕ್ಷೆ ಆರಂಭ

 Suddilive || Shivamogga

PUC exams starts from today. 10027 students are going to face the exams.

PUC, Exams


ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 1ರಿಂದ 20 ರ ವರೆಗೆ ನಡೆಯಲಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 39 ಪರೀಕ್ಷಾ ಕೇಂದ್ರಗಳಿರುತ್ತವೆ.  ರೆಗ್ಯುಲರ್ ವಿದ್ಯಾರ್ಥಿಗಳು17196 ಬಾಲಕರು: 7166 ಬಾಲಕಿಯರು :10027 ಬರೆಯಲಿದ್ದಾರೆ. ಹಾಗೂ ಖಾಸಗಿ ಅಭ್ಯರ್ಥಿಗಳು :496, ರಿಪೀಟರ್ ವಿದ್ಯಾರ್ಥಿಗಳು: 526 

 ಇಂಪ್ರೂವ್ಮೆಂಟ್ ವಿದ್ಯಾರ್ಥಿಗಳು  : 03 

ಸೇರಿದಂತೆ ಒಟ್ಟು 18,218 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ ಕಲಾವಿಭಾಗದಲ್ಲಿ 4019, ವಾಣಿಜ್ಯ ವಿಭಾಗದಲ್ಲಿ 5432 ಮತ್ತು ವಿಜ್ಞಾನ ವಿಭಾಗದಲ್ಲಿ 7,742 ಪರೀಕ್ಷೆ ಬರೆಯಲಿದ್ದಾರೆ   ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಮುಖ್ಯಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರುಗಳನ್ನು  ನೇಮಕ ಮಾಡಲಾಗಿದೆ ಎಲ್ಲಾ ಪರೀಕ್ಷೆ ಕೇಂದ್ರಗಳಲ್ಲೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು   ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಒಟ್ಟು 12 ಪ್ರಶ್ನೆ ಪತ್ರಿಕೆ ಮಾರ್ಗಗಳನ್ನು ಮಾಡಲಾಗಿದ್ದು ಭದ್ರವಾಗಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತ್ರಿಸದಸ್ಯರ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ  ಜಿಪಿಎಸ್ ಅಳವಡಿಸಲಾಗಿದ್ದು ಮಾನಿಟರ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಖಜಾನೆಯಲ್ಲಿ 24x7 ಸಿಸಿಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 


 ಒಟ್ಟಾರೆಯಾಗಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ನಿರ್ಭೀತವಾಗಿ  ಪರೀಕ್ಷೆಯನ್ನು ಬರೆಯಲೆಂದು ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯ ಮಾನ್ಯ ಉಪನಿರ್ದೇಶಕರಾದ ಶ್ರೀ ಚಂದ್ರಪ್ಪ ಎಸ್ ಗುಂಡಪಲ್ಲಿ ರವರು  ಶುಭ ಹಾರೈಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close