Suddilive || Shivamogga
Request to submit revised provisional list - if any objections-ಪರಿಷ್ಕೃತ ತಾತ್ಕಾಲಿಕ ಪಟ್ಟಿ-ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಕೋರಿಕೆ
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಭದ್ರಾವತಿ ತಾಲೂಕಿನಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರು ಮತ್ತು 72 ಸಹಾಯಕಿಯರ ಹುದ್ದೆಗಳಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು
ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತ್, ಪುರಸಭೆ ಹಾಗೂ ನಗರಸಭೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿ:27/03/2025 ರೊಳಗಾಗಿ ಭದ್ರಾವತಿಯ ಶಿಶು ಅಭಿವೃದ್ದಿ ಯೋಜನಾಧಿಕಾರಿಯ ಕಛೇರಿಗೆ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಯ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.