Suddilive || Sahara
Demanding to address inadequate power supply and TC shortage in rural areas, Bjp protest in sagar-ವಿದ್ಯುತ್ ಪೂರೈಕೆ ಮತ್ತು ಟಿ.ಸಿ. ಕೊರತೆ ನೀಗಿಸುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಗ್ರಾಮಾಂತರ ಪ್ರದೇಶದಲ್ಲಿನ ಅಸಮರ್ಪಕ ವಿದ್ಯುತ್ ಪೂರೈಕೆ ಮತ್ತು ಟಿ.ಸಿ. ಕೊರತೆ ನೀಗಿಸುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ, ಜಿಲ್ಲೆಯಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ರೈತರು, ಜನಸಾಮಾನ್ಯರ ಕಂಗಾಲಾಗಿದ್ದಾರೆ. ಬಹುವಾರ್ಷಿಕ ಬೆಳೆಗಳು ನೀರಿನ ಅಭಾವದಿಂದ ಸಂಪೂರ್ಣ ನಾಶವಾಗಿದ್ದು, ಕೂದಲು ಸರಿ ಮಾಡಿಕೊಂಡು ಓಡಾಡುವ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಕನ್ನಡ ಹಾಕಿಕೊಂಡು ತಿರುಗುವ ಶಾಸಕರಿಗೆ ರೈತರ ಕಷ್ಟ ಗೊತ್ತಾಗುತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ೬೦ ವರ್ಷದ ಮುಳುಗಡೆ ಸಮಸ್ಯೆ ಕುರಿತು ಹಾಲಪ್ಪ ಸೆಗಣಿ ತಿನ್ನುತ್ತಿದ್ದರಾ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪ್ರಶ್ನೆ ಮಾಡಿದ್ದರು. ಕಳೆದ ಮೂರು ತಿಂಗಳಿನಿAದ ಗ್ರಾಮಾಂತರ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆ ಗೊತ್ತಿದ್ದೂ ಗೊತ್ತಿಲ್ಲದಂತೆ ಇರುವ ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರೇ ನೀವು ಏನು ತಿನ್ನುತ್ತಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು.
ರಾಜ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಗಮನ ಹರಿಸಲು ವಿದ್ಯುತ್ ಸಚಿವರಿಗೆ ಖಾತೆ ಕುರಿತು ಮಾಹಿತಿಯೆ ಇಲ್ಲ. ಭ್ರಷ್ಟಾಚಾರದ ಹಣದಲ್ಲಿ ಕೂರ್ಗ್ನಲ್ಲಿ ಸಾವಿರಾರು ಎಕರೆ ತೋಟ ಖರೀದಿ ಮಾಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಒಂದು ದಿನವೂ ತೋಟ ಓಡಾಡಿದ ಅನುಭವ ಹೊಂದಿಲ್ಲ. ಹಿಂದೆ ಶೋಭಾ ಕರಂದ್ಲಾಜೆ, ಕೆ.ಎಸ್.ಈಶ್ವರಪ್ಪ ಅಂತಹವರು ಮಳೆ ಕೊರತೆ, ಡ್ಯಾಂಗಳಲ್ಲಿ ನೀರಿನ ಸಂಗ್ರಹಣೆ ಕಡಿಮೆ ಇದ್ದ ಸಂದರ್ಭದಲ್ಲಿಯೂ ರಾಜ್ಯದ ಜನರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿದ್ದರು. ಆದರೆ ಈಗಿನ ಸಚಿವರಿಗೆ ವಿದ್ಯುತ್ ನಿರ್ವಹಣೆ ಬಗ್ಗೆಯೆ ಗಮನ ಇಲ್ಲ ಎಂದು ದೂರಿದ ಅವರು, ಕ್ಷೇತ್ರವ್ಯಾಪ್ತಿಯಲ್ಲಿ ನಾನು ಶಾಸಕನಾಗಿದ್ದಾಗ, ಎಂಎಸ್‌ಐಎಲ್ ಅಧ್ಯಕ್ಷನಾಗಿದ್ದಾಗ ಏನೇನು ಅಭಿವೃದ್ದಿ ಮಾಡಿದ್ದೇನೆ, ಅನುದಾನ ಎಷ್ಟು ತಂದಿದ್ದೇನೆ ಎಂದು ಅಂಕಿಅAಶಗಳ ವಿವರ ಇದೆ. ನೀವು ಶಾಸಕರಾಗಿ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಎಷ್ಟು ಅನುದಾನ ನಿಮ್ಮ ನಿಗಮದಿಂದ ತಂದಿದ್ದೀರಿ ಎಂದು ಲೆಕ್ಕಕೊಡಿ. ಸೋತವರೆಲ್ಲಾ ಪಾಪಿಗಳು ಎನ್ನುವ ನಿಮ್ಮ ಮಾತು ನಿಜವಾದರೆ ನಿಮ್ಮನ್ನು ಸೇರಿಸಿ ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಮಧು ಬಂಗಾರಪ್ಪ, ಯಡಿಯೂರಪ್ಪ ಹೀಗೆ ಅನೇಕರು ಸೋಲು ಅನುಭವಿಸಿದ್ದಾರೆ. ಅವರು ಪಾಪಿಗಳಾ ಎನ್ನುವುದನ್ನು ಜನರ ಪ್ರಶ್ನೆಗೆ ಉತ್ತರಿಸಿ, ಮುಂದಿನ ನಾಲ್ಕೆöÊದು ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದೆ ಹೋದಲ್ಲಿ ಕಚೇರಿಗೆ ಬೀಗ ಜಡಿಯುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ಬಿ.ಸ್ವಾಮಿರಾವ್ ಮಾತನಾಡಿ, ಕ್ಷೇತ್ರವ್ಯಾಪ್ತಿಯಲ್ಲಿ ಗಂಭೀರವಾದ ವಿದ್ಯುತ್ ಸಮಸ್ಯೆಯಿದ್ದು ಸಚಿವರು, ಶಾಸಕರು ಏನು ಮಾಡುತ್ತಿದ್ದೀರಿ. ರೈತರು ತಮ್ಮ ಜಮೀನಿಗೆ ವಿದ್ಯುತ್ ಸಮಸ್ಯೆಯಿಂದ ನೀರು ಹರಿಸಲಾಗದೆ ಫಸಲು ಕಳೆದುಕೊಳ್ಳುತ್ತಿದ್ದಾರೆ. ಶಾಸಕರು ಸುಮಾರು ೨ ಕೋಟಿ ರೂ. ವೆಚ್ಚದಲ್ಲಿ ಅನುಶ್ರೀಯನ್ನು ಕರೆಸಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಮ್ಮನಘಟ್ಟ ದೇವಸ್ಥಾನಕ್ಕೆ ಸರ್ಕಾರದಿಂದ ಮಂಜೂರಾಗಿದ್ದ ಹಣವನ್ನು ತಡೆಹಿಡಿದು ದೈವದ್ರೋಹ ಮಾಡಿದ್ದಾರೆ. ಆದರೂ ದೇವಸ್ಥಾನ ಅಭಿವೃದ್ದಿ ಕೆಲಸ ನಡೆಯುತ್ತಿದ್ದು, ಮುಂದಿನ ಒಂದು ತಿಂಗಳಿನೊಳಗೆ ದೇವಸ್ಥಾನ ಲೋಕಾರ್ಪಣೆ ನಡೆಯಲಿದೆ ಎಂದರು.