suddilive || Sagara
Road accident at Sagara taluka, anandapur hobli, hosagunda village-ಹೊಸಗುಂದದಲ್ಲಿ ರಸ್ತೆ ಅಪಘಾತ, ಬೈಸ್ ಸವಾರ ಸಾವು
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸಗುಂದ ಗ್ರಾಮದ ತಿರುವಿನ ಬಳಿ ಬೈಕ್, ಕಾರು, ಆಟೋ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದ ಬೈಕ್ ಚಾಲಕ ಶಿರಸಿ ಕಡೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಟೋ ಚಾಲಕ ಕೂಡ ಸಾವು :- ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Road accident at Sagara taluka