ಹೊಟ್ಟೆನೋವು ತಾಳಲಾರದೆ ಗ್ರಾಮ ಪಂಚಾಯಿತಿ ಸದಸ್ಯನ ಪತ್ನಿ ಆತ್ಮಹತ್ಯೆ-commits suicide after stomach pain

 suddilive || shivamogga

 ಹೊಟ್ಟೆನೋವು ತಾಳಲಾರದೆ ಗ್ರಾಮ ಪಂಚಾಯಿತಿ ಸದಸ್ಯನ ಪತ್ನಿ ಆತ್ಮಹತ್ಯೆ- Gram panchayat member's wife commits suicide after stomach pain

Commits, suicide

ಶಿವಮೊಗ್ಗ ಗ್ರಾಮಾಂತರ ಭಾಗದ ಗ್ರಾಮ ಪಂಚಾಯಿತಿಯ ಸದಸ್ಯರೊಬ್ಬರ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 

ಕೋಟೆಗಂಗೂರಿನ ಗ್ರಾಮಪಂಚಾಯಿತಿ ಸದಸ್ಯ ಮಂಜುನಾಥ್ ಅವರ ಪತ್ನಿ ಶೋಭ ಎಂಬ 35 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. 

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶೋಭ ಅನಾರೋಗ್ಯದಿಂದ ಬೇಸತ್ತು ಮಂಗಳವಾರ ವಿಷ ಸೇವಿಸಿದ್ದರು. ಅವರನ್ನ ತಕ್ಷಣ ಶಿವಮೊಗ್ಗದ ಮೆಗ್ಗಾನ್ ಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. 

ಶುಕ್ರವಾರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

commits suicide after stomach pain

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close