ಧರ್ಮಾಧಾರಿತ ಮೀಸಲಾತಿ ಜಾರಿಗೆ ತಂದಿರುವುದನ್ನು ಖಂಡಿಸಿ ಟೈರ್ ಗೆ ಬೆಂಕಿ ಹಾಕಿ ಬಿಜೆಪಿ ಪ್ರತಿಭಟನೆ-BJP protests by burning tires to condemn implementation of religion-based reservation
ಸರ್ಕಾರ ಧರ್ಮಾಧಾರಿತ ಮೀಸಲಾತಿ ಜಾರಿಗೆ ತಂದಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ದಲ್ಲಿ ಟೈರ್ ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಗೋಪಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ವೀಕರ್ ಯು.ಟಿ.ಖಾದರ್ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಪ್ರತಿಭಟನೆ ಯಲ್ಲಿ ಶಾಸಕ ಆರಗ ಜ್ಞಾನೇಂದ್ರ, ಚನ್ನಬಸಪ್ಪ, ಎಂಎಲ್ ಸಿ ಧನಂಜಯ ಸರ್ಜಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು.
condemn implementation of religion-based reservation