Suddilive || Shivamogga
ರಾಹುಲ್ ಮತ್ತು ಸೋನಿಯ ಪ್ರತಿಕೃತಿ ದಹನ-Rahul and Soniya gandhi effigy burnt
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಸಂಸದೀಯ ಸ್ಥಾನವನ್ನ ರದ್ದುಗೊಳಿಸುವಂತೆ ಆಗ್ರಹಿಸಿ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಪಕ್ಷದ ಯುವ ಮೋರ್ಚಾ ಪ್ರತಿಭಟನೆ ನಡೆಸಿ ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಕೃತಿ ದಹಿಸಲಾಯಿತು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ಸಂಸದರಾದ ರಾಹುಲ್ ಗೆ ನ್ಯಾಯಾಲಯ ಚಾರ್ಜ್ ಶೀಟ್ ಸಲ್ಲಿಸಲು ಸೂಚಿಸಿದೆ. ಇಡಿ ಚಾರ್ಜ್ ಶೀಟ್ ಸಲ್ಲಿಸಿದ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರ ಸಂಸದೀಯ ಸ್ಥಾನ ಮತ್ತು ಸೋನಿಯಾಗಾಂಧಿ ಅವರ ರಾಜ್ಯಸಭ ಸದಸ್ಯತ್ವದಿಂದ ವಜಾಗೊಳಿಸಬೇಕು ಹಾಗೂ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಿವಮೊಗ್ಗ ನಗರದ ಕೋಟೆ ಠಾಣ ವ್ಯಾಪ್ತಿಯ ಶಿವಪ್ಪ ನಾಯಕ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಜನರು ಸೇರಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಪಾಲ್ಗೊಂಡಿರುತ್ತಾರೆ.ಸ್ಥಳೀಯ ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರು.
effigy burnt