Suddilive || Shivamogga
ಜನಿವಾರ ವಿಚಾರದಲ್ಲಿ ಸೆಕ್ಯೂರಿಟಿ ಗಾರ್ಡ್ ತಲೆದಂಡ?Security guard's headbutt in the Janiwara incident?
ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಮ್ ಗಾರ್ಡ್ ಮೇಲೆ ಕ್ರಮ ಜರುಗಿಸುವ ಸಾಧ್ಯತೆ ಹೆಚ್ಚಿದೆ. ಜಿಲ್ಲಾ ಉಸ್ತುವಾರಿ ಸಚಿವ ಅವರ ಖಡಕ್ ನಿರ್ಧಾರದ ಆಧಾರದ ಮೇಲೆ ಸೆಕ್ಯೂರಿಟಿ ಗಾರ್ಡ್ ಮೇಲೆ ಕ್ರಮ ಜರುಗಿಸುವ ಸಾಧ್ಯತೆಯಿದೆ.
ಮೊನ್ನೆ ಆದಿಚುಂಚನಗಿರಿ ಪರೀಕ್ಷೆ ಕೇಂದ್ರದಲ್ಲಿ ಸಿಇಟಿ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಘಟನೆ ನಡೆದಿತ್ತು. ಈ ಘಟನೆಯನ್ನ ಬ್ರಾಹ್ಮಣ ಮಹಾಸಭಾ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು.
ಮನವಿಗೆ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ಮಾಧ್ಯಮಗಳಿಗೆ ತಿಲಿಸಿದ್ದರು. ಈ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದರು. ಈ ಕುರಿತು ಸುದ್ದಿಲೈವ್ ಗೆ ಮಾತನಾಡಿರುವ ಜಿಲ್ಲಾಧಿಕಾರಿಗಳು ಸಚಿವರ ನಿರ್ದೇಶನದ ಮೇರೆಗೆ ಕ್ರಮ ಜರುಗಿಸುವುದಾಗಿ ಹೇಳಿದ್ದರು.
ಈ ಹಿನ್ನಲೆಯಲ್ಲಿ ಜನಿವಾರ ತೆಗೆಸಿದ್ದ ಹೋಮ್ ಗಾರ್ಡ್ ಮೇಲೆ ಕ್ರಮ ಜರುಗುವ ಸಾಧ್ಯತೆಯಿದೆ. ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗದಂತೆ ನೋಡಿಕೊಳ್ಳಬೇಕೆಂಬ ಸೂಚನೆ ಇದ್ದರೂ ಸೆಕ್ಯೂರಿಟಿ ಗಾರ್ಡ್ ಅತಿರೇಕವಾಗಿ ವರ್ತಿಸಿದ ಹಿನ್ನಲೆಯಲ್ಲಿ ಕ್ರಮಜರುಗಿಸುತ್ತಿರುವ ಆರೋಪ ಕೇಳಿ ಬಂದಿದೆ.
Security guard's headbutt