Suddilive || Anandapur
ರೈಲಿಗೆ ಸಿಲುಕಿ ಆತ್ಮಹತ್ಯೆ-Suicide by being hit by a train
ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ನಡೆದಿದೆ.
ನಿನ್ನೆ ಈ ಘಟನೆ ನಡೆದಿದ್ದು, ನಿನ್ನೆ ಮಧ್ಯಾಹ್ನದ ನಂತರ ಬೆಳಕಿಗೆ ಬಂದಿದೆ. ನಿರ್ದಿಷ್ಟವಾಗಿ ಇದೇ ರೈಲಿಗೆ ಸಿಲುಕಿ ಅತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಹೇಳಲು ಸಾಧ್ಯವಾಗುತ್ತಿಲ್ಲದ ಕಾರಣ ಪ್ಯಾಸೆಂಜರ್ ರೈಲಿಗೆ ಸಿಲುಕಿ ಸಾವನ್ನಪ್ಪಿರ ಬಹುದು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನ ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆದ ಕಾರಣ ಇದೊಂದು ಆತ್ಮಹತ್ಯೆಯಾಗಿರ ಬಹುದಾಗಿದೆ ಎಂದು ಶಂಕಿಸಲಾಗುತ್ತಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ಸುತ್ತಮುತ್ತಲಿನ ನಿವಾಸಿ ಎಂದು ಅಂದಾಜು ಮಾಡಲಾಗಿದೆ.
ಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Suicide by being hit by a train