Suddilive || Shivamogga
ಎಲ್ಲರನ್ನೂ ಹಿಡಿದು ವ್ಯಾನ್ ಗೆ ತುಂಬಿಸಿಕೊಂಡ ಪೊಲೀಸರು-The police grabbed everyone and loaded them into a van.
ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ ಯಾತ್ರೆ ಮಾಡುವ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ. ಬಿಜೆಪಿಯ ಜನಾಕ್ರೋಶ ಯಾತ್ರೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹರ್ಷಿತ್ ಗೌಡ ಆಕ್ರೋಶ ವ್ಯಕ್ತಪಡಿಸಿದರು .
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ದುಬಾರಿಯಾಗಿದ್ದಾಗ ಯುಪಿಎ ಸರ್ಕಾರ ಕೇವಲ 63ರೂಪಾಯಿಗೆ ಪೆಟ್ರೋಲ್ ಮಾರಾಟಾಡುತ್ತಿತ್ತು. ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದರೂ ಬಿಜೆಪಿ 103 ರೂ.ಗೆ ಲೀಟರ್ ಪೆಟ್ರೋಲ್ ಮಾರಾಟ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯೇ ಕಾರಣ ಎಂದರು.
ಕೇಂದ್ರ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆಯ ನಾಟಕವಾಡುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಈಡೇರಿಸಿ ಜನಸಾಮಾನ್ಯರ ಮನ ಗೆದ್ದಿದೆ. ಇದನ್ನು ಸಹಿಸಲಾಗದೇ ಬಿಜೆಪಿ ಜನಾಕ್ರೋಶದ ನಾಟಕವಾಡುತ್ತಿದ್ದು ಇದನ್ನು ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್ ಜನಾಕ್ರೋಶ ಯಾತ್ರೆ ಕೈಬಿಟ್ಟು ತನ್ನದೇ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಮನವೊಲಿಸಿ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಕಾಂಗ್ರೆಸ್ ವಕ್ತರರಾದ ರಮೇಶ್ ಹೆಗಡೆ ಆಗ್ರಹಿಸಿದರು
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವಿಧಾನಸಭೆ ಅಧ್ಯಕ್ಷ ಚರಣ್, ಪ್ರವೀಣ್, ಸಾಕ್ಲಿನ್, ಗಿರೀಶ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಆಕಾಶ್ ಯುವ ಮುಖಂಡರಾದ
ಮಧುಸೂಧನ, ಅಕ್ಬರ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಜೀವನ್, ಚಂದ್ರೋಜಿ ರಾವ್, ಕಾರ್ತಿಕ್, ಸುಭಾನ್, ರವಿ, ಗೌತಮ್, ಅಭಿ, ಮೋಹನ್, ಅನಂತ ಬೊಮ್ಮನಕಟ್ಟೆ,ನಿಖಿಲ್,
ವಿಷ್ಣು ,ಲಿಂಗರಾಜ,ನರಸಿಂಹ ಹಾಗು ಸಾಕಷ್ಟು ಕಾರ್ಯಕರ್ತರನ್ನ BJP ಸಭೆ ನಡೆಯುತ್ತಿದ್ದ ಗೋಪಿ ವೃತ್ತದ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು 57 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.
loaded them into a van.