ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ-Applications invited for temporary vacancies

SUDDILIVE || SHIVAMOGGA

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ-Applications invited for temporary vacancies in the Department of Agriculture

 

Applications, vacancies

ಶಿವಮೊಗ್ಗ ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು.

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಬಿ.ಟೆಕ್/ಎಂಸಿಎ ಮತ್ತು ಕಂಪ್ಯೂಟರ್ ಅಪರೇಟರ್ ಬಿಸಿಎ/ಪದವಿ ಜೊತೆಗೆ ಕಂಪ್ಯೂಟರ್ ಕೌಶಲ್ಯಾ ಹೊಂದಿರಬೇಕು. ಬಿ.ಟೆಕ್ ಎಂಸಿಎ ಆದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. 

ಮೇಲ್ಕಂಡ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು 45 ವರ್ಷ ಮೀರಿರಬಾರದು. ಸ್ನಾತಕ/ಸ್ನಾತಕೋತ್ತರ/ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂತಿಮ ಅಂಕಪಟ್ಟಿ, ಪ.ಜಾ/ಪ.ಪಂ. ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ. ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ನೇಮಕಾತಿ ಆದೇಶ ಪತ್ರ. ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧ ಪಟ್ಟ ಸಂಸ್ಥೆಯಿಂದ ಹಾಜರಾತಿ ಪ್ರಮಾಣ ಪತ್ರ. ಸಂಸ್ಥೆಯಿಂದ ವೇತನ ದೃಢೀಕರಣ, ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಯನ್ನು ಸಲ್ಲಿಸುವುದು

ಆಸಕ್ತ ಅಭ್ಯರ್ಥಿಗಳು ಸೂಕ್ತ ವಿದ್ಯಾರ್ಹತೆ ಅನುಭವ ಹಾಗೂ ಕಂಪ್ಯೂಟರ್ ಸಾಕ್ಷರತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮೇ 23 ರೊಳಗಾಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ-577201 ಇಲ್ಲಿಗೆ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Applications invited for temporary vacancies

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close